ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು

0

ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ ಬಿಲ್ಲವ ಸಮಾನ ಮನಸ್ಕರು6E37A339 2E04 44CA B362 9B98C382840C E1614409129529

ಉಡುಪಿ : ಮಾರಣಾಂತಿಕವಾಗಿ ಹಲ್ಲೆಗೊಳಗಾದ ಬಾರಕೂರಿನ ಆರ್ ಟಿ ಐ ಕಾರ್ಯಕರ್ತ ಶಂಕರ ಶಾಂತಿಯವರು‌‌ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಮತ್ತು ಪದಾಧಿಕಾರಿಗಳಿಂದ ಫೆಬ್ರವರಿ 25ರಂದು ಮನವಿ ಸಲ್ಲಿಸಲಾಗಿದ್ದರೂ ದುಷ್ಕರ್ಮಿಗಳನ್ನು ಇನ್ನೂ ಬಂಧಿಸದಿರುವುದರಿಂದ ಇಂದು ಉಡುಪಿ ಬನ್ನಂಜೆ ಬಿಲ್ಲವ ಸಂಘದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಮಾನ ಮನಸ್ಕರು ಜೊತೆಯಾಗಿ ಸಭೆ ಸೇರಿದರು.

ಈ ಸಂದರ್ಭ ಮಾತನಾಡಿದ ಉಡುಪಿ ಜಿಲ್ಲಾ ನಗರ ಸಭೆಯ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸಂಘಟಿತ ಹೋರಾಟದ ಮೂಲಕ ನಾವು ಮುಂದಿನ ಹೆಜ್ಜೆ ಇಡಬೇಕಾಗಿದೆ. ಹತಾಶೆ ಭಾವನೆಯನ್ನು ಬಿಟ್ಟು ಧನಾತ್ಮಕತೆಯಲ್ಲಿ ನಾವು ಮುನ್ನಡೆಯುವ ಎಂದರು.9345A931 4F66 4777 85FE 5C01260B8E94 E1614408794897

ರಾಮ ಮಾಸ್ಟರ್ ಶಂಕರ್ ಶಾಂತಿಯವರಿಗೆ ಧೈರ್ಯ ತುಂಬುವ ಕಾರ್ಯದೊಂದಿಗೆ ದುಷ್ಕರ್ಮಿಗಳನ್ನು ಪೋಲಿಸ್ ಇಲಾಖೆ ಬಂಧಿಸಿ ಸರಿಯಾದ ಶಿಕ್ಷೆ ಸಿಗುವವರೆಗೆ ಹೋರಾಡಬೇಕಿದೆ ಎಂದರು.

ಸಮಾನ ಮನಸ್ಕರಾದ ಕಿರಣ್ ಮಾತನಾಡಿ ಶಂಕರ್‌ ಪೂಜಾರಿ ನಿಸ್ವಾರ್ಥ ಸಮಾಜ ಸೇವಕರಾಗಿ ಸಮಾಜದಲ್ಲಿಯ ಭೃಷ್ಟರ ಭೃಷ್ಟಾಚಾರವನ್ನು ಬಯಲಿಗೆಳೆಯುವ ಕಾರ್ಯ ಮಾಡುತ್ತಿದ್ದು ಅದರಿಂದ ಸಾರ್ವಜನಿಕರಿಗೆ ಉಪಯೋಗವಾಗಿದೆ. ಆದರೆ ಭೃಷ್ಟರಿಗೆ ಕಂಟಕವಾಗಿದೆ. ಹಲ್ಲೆ ಪೂರ್ವನಿಯೋಜಿತವಾಗಿದ್ದು, ಶಂಕರ ಶಾಂತಿಯವರಿಗೆ ನ್ಯಾಯ ಸಿಗುವವರೆಗೆ ಹೋರಾಡುವ ಎಂದರು.

ಬಿಲ್ಲವ ಚಿಂತಕ‌ ದಯಾನಂದ ಉಗ್ಗೆಲ್ ಬೆಟ್ಟು ಮಾತನಾಡಿ ಸಮಾಜದಲ್ಲಿಯ ಅನ್ಯಾಯಕ್ಕೆ ತುಡಿಯುವ ಮನಸ್ಥಿತಿಯ ಶಂಕರ್ ಶಾಂತಿಯವರ ಹೋರಾಟ ಮುಂದೆಯೂ ಸಾಗಲು ನಾವೆಲ್ಲ ಅವರಿಗೆ ಧೈರ್ಯ ತುಂಬಬೇಕಾಗಿದೆ. ಕೆಲವು ಕ್ಷುಲ್ಲಕ ಮನಸಿನ ವ್ಯಕ್ತಿಗಳು ಈ ಹೋರಾಟದ‌ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದು99592A82 B62F 49A1 8E7E 75FE6EB5A9A5 E1614409175933

ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ವಹಿಸಿ ಮಾತನಾಡಿ ಘಟನೆ ನಡೆದು 6 ದಿವಸವಾದರೂ ಇನ್ನೂ ದುಷ್ಕರ್ಮಿಗಳನ್ನು ಬಂಧಿಸದಿರುವುದು ಪೋಲಿಸ್ ಇಲಾಖೆಯ ಮೇಲೆ ನಮಗೆ ಅನುಮಾನ ಮೂಡಿಸುತ್ತಿದೆ. ಒಂದು ವೇಳೆ ಬಂಧಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಉಪಸ್ಥಿತರಿದ್ದ ಸಮಾಜ ಬಾಂಧವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಪದಾಧಿಕಾರಿಗಳು, ಬಿಲ್ಲವ ಸಮಾಜದ ಸಮಾನ ಮನಸ್ಕರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *