ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ನೀರಿಕ್ಷೆ : ಸಿಎಂ ಬೊಮ್ಮಾಯಿ

0

ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್​ ಮತ್ತು ಡೀಸೆಲ್​ ಮೇಲಿ ಅಬಕಾರಿ ಸುಂಕವನ್ನು ಕಡಿತಗೊಳಿಸದ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೂಡ ಪೆಟ್ರೋಲ್​, ಡೀಸೆಲ್ ಮೇಲೆ ತಲಾ 7 ರೂಪಾಯಿ ಬೆಲೆ ಕಡಿತಗೊಳಿಸಿದೆ. ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮಾಹಿತಿ ನೀಡಿದ್ದಾರೆ.

Images 18

ಸರಣಿ ಟ್ವೀಟ್ ಮಾಡಿರುವ ಬೊಮ್ಮಾಯಿ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮೇಲೆ 10 ರೂಪಾಯಿ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಜನರಿಗೆ ದೀಪಾವಳಿಯ ಉಡುಗೊರೆ ಕೊಟ್ಟಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

 

ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರದ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2,100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.

 

ರಾಜ್ಯ ಸರ್ಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ. ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಸಿಎಂ ಬೊಮ್ಮಾಯಿ ಟ್ವೀಟ್​ ಮಾಡಿದ್ದಾರೆ.

 

 


Leave a Reply

Your email address will not be published. Required fields are marked *