ಶ್ರೀ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ವಿಕೃತಿ-ತಪ್ಪೊಪ್ಪಿಕೊಳ್ಳದಿದ್ರೆ ದೈವದ ಮೊರೆ ಹೋಗುವ ಎಚ್ಚರಿಕೆ

0

ಬೆಳ್ತಂಗಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದುವಿಕೃತಿ ಮೆರೆದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ.

ಮರೋಡಿ ಗ್ರಾಮದ ಪೊಸರಡ್ಕ ಗರೋಡಿ ವಠಾರದಲ್ಲಿ ಬುಧವಾರ ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಏಕಾ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ.

ಪೊಸರಡ್ಕ ವಠಾರದಲ್ಲಿ ಗರೋಡಿ ಇದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿಸಂಪನ್ನಗೊಂಡಿತ್ತು.B09FCF1D 0492 4BE3 8F12 218988099756 E1670048451661

ಆದರೆ ಇದೀಗ ಬ್ಯಾನರ್ ತೆರವುಗೊಳಿಸುವ ಮುನ್ನವೇ ಅದನ್ನು ಹರಿದು ಕ್ಷೇತ್ರಕ್ಕೆ ಅಪಮಾನ ಎಸಗಿದ್ದಾರೆ ಎಂದು ಅರೋಪಿಸಲಾಗಿದೆ.

ವಿಕೃತಿ ಮೆರೆದವರು ಯಾರೇ ಅಗಿದ್ದರೂ ತಪ್ಪೋಪ್ಪಿಕೊಳ್ಳದೆ ಹೋದರೆ ದೈವಗಳ ಮೊರೆ ಹೋಗುವುದಾಗಿ ಯಕ್ಷಗಾನಆಯೋಜಕರು ತಿಳಿಸಿದ್ದಾರೆ.


Leave a Reply

Your email address will not be published. Required fields are marked *