ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ
ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ ಪರಿಸರದಿಂದ ಬಂದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಎತ್ತಿ ಹಿಡಿದ ನಿಮ್ಮ ಸಾಹಸ ಅಪ್ರತಿಮ. ನಿಮ್ಮ ಈ ಸಾಧನೆಯ ಪಯಣ ಇಲ್ಲಿಗೆ ನಿಲ್ಲದಿರಲಿ. ‘ಮಹಿಳಾ ಮಾಣಿಕ್ಯ’ ಪ್ರಶಸ್ತಿಯು ನಿಮ್ಮ ಮುಕುಟಕ್ಕೆ ಮತ್ತೊಂದು ಗರಿ ಅಷ್ಟೇ. ಮುಂದಿನ ದಿನಗಳಲ್ಲಿ ನೀವು ಇನ್ನೂ ಉನ್ನತ ಶಿಖರಗಳನ್ನು ಏರಿ, ದೇಶಕ್ಕೆ ಮತ್ತಷ್ಟು ಹೆಸರನ್ನು ತಂದುಕೊಡಿ ಎಂದು ಆಶಿಸುತ್ತೇವೆ.
