ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ

0
Screenshot

Screenshot


ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ ಹೆಸರನ್ನು, ಅವುಗಳ ರಾಷ್ಟ್ರ ಧ್ವಜಗಳನ್ನು ಗುರುತಿಸಿ ಈ ದಾಖಲೆಯನ್ನು ಸೃಷ್ಟಿಸಿದ್ದಾನೆ. ಬಾಲಕನಿಗೆ ಎಂಟು ವರ್ಷ ಒಂಭತ್ತು ತಿಂಗಳಾಗಿದ್ದು ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆಗೆ ಅರ್ಹನಾಗಿದ್ದು, ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಇದು ದಾಖಲಾಗಿದೆ ಎಂದು ಡಿಸೆಂಬರ್ 19, 2025 ರಂದು ಅಧಿಕೃತವಾಗಿ ಘೋಷಿಸಲಾಗಿದೆ. ಸುಪ್ರೀತ್ ಬಂಗೇರ ಹಾಗೂ ಶ್ರೀಮತಿ ದೀಕ್ಷಾ ಸುಪ್ರೀತ್ ಬಂಗೇರ ಇವರ ಮಗನಾಗಿದ್ದು, ಪ್ರಸ್ತುತ ಬೆಂಗಳೂರಿನ ಲ್ಯಾಂಡ್ ಮಾರ್ಕ್ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ.


Leave a Reply

Your email address will not be published. Required fields are marked *