ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಉಡುಪಿ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಚಿನ್ನದ ಪದಕ
Screenshot
ಉಡುಪಿ: ಉಡುಪಿ ತಾಲ್ಲೂಕಿನ ಮಠದಬೆಟ್ಟು ಗ್ರಾಮದ ನಿವಾಸಿ ಸ್ಮಿತಾ ಪೂಜಾರಿ ಅವರು ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ.
ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ತುಮಕೂರು ಇಲ್ಲಿ ವ್ಯಾಸಂಗ ಮಾಡಿದ ಸ್ಮಿತಾ ಪೂಜಾರಿ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ನಡೆಸಿದ ಎಂ.ಟೆಕ್ ಪರೀಕ್ಷೆಯಲ್ಲಿ ದ್ವಿತೀಯ ರ‍್ಯಾಂಕ್ ಪಡೆದು ಚಿನ್ನದ ಪದಕದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಸ್ಮಿತಾ ಪೂಜಾರಿ ಅವರು ಮಠದಬೆಟ್ಟು ಗ್ರಾಮದ ನಿವಾಸಿಗಳಾದ ಶಶಿಕಲಾ ಮತ್ತು ನಾರಾಯಣ ಪೂಜಾರಿ ದಂಪತಿಯ ಪುತ್ರಿ. ಪ್ರಾಥಮಿಕ ಹಂತದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.97ರಷ್ಟು ಅಂಕಗಳನ್ನು ಗಳಿಸಿದ್ದರು.
ಶಾಲಾ ಹಂತದಿಂದಲೇ ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ತೋರುತ್ತಾ ಬಂದಿರುವ ಸ್ಮಿತಾ ಪೂಜಾರಿ ಅವರು, ಉನ್ನತ ಶಿಕ್ಷಣದಲ್ಲಿಯೂ ತಮ್ಮ ಪ್ರತಿಭೆಯನ್ನು ಮೆರೆದಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.
ಎಂ.ಟೆಕ್‌ನಲ್ಲಿ ದ್ವಿತೀಯ ರ‍್ಯಾಂಕ್ ಹಾಗೂ ಚಿನ್ನದ ಪದಕ ಗಳಿಸಿರುವ ಅವರ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು, ಶಿಕ್ಷಕರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
