ಎಸ್‌ಎಸ್‌ಎಲ್ಸಿ ಪಾಸ್ ಆದವರಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹಧನ

0

ಬೆಂಗಳೂರು: ಎಸ್‌ಎಸ್‌ಎಲ್ಸಿಯಲ್ಲಿ ಶೇಕಡ 60 ರಷ್ಟು ಅಂಕ ಗಳಿಸಿದವರಿಗೆ ತಲೆ 2000 ರೂ., ಶೇಕಡ 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹಧನ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

IMG 20211013 WA0000 300x180

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಸಮಸ್ಯೆ ಬಗೆಹರಿಸಲಾಗಿದೆ. ಶೇಕಡ 60 ಕ್ಕಿಂತ ಹೆಚ್ಚು ಅಂಕ ಪಡೆದ ತಲಾ 2000 ರೂ., ಶೇ. 75 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ 15 ಸಾವಿರ ಪ್ರೋತ್ಸಾಹ ಧನ ನೀಡಲಿದ್ದು ಇದಕ್ಕಾಗಿ 51 ಕೋಟಿ ರೂಪಾಯಿ ವೆಚ್ಚ ಭರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

 

ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸುಗಳಿಗೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆದ 13,000 ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಪಾವತಿಸಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.


Leave a Reply

Your email address will not be published. Required fields are marked *