TOP STORIES:

ಬೆಳ್ಳಿ ಹಬ್ಬದ ಸಂದರ್ಭದಲ್ಲಿ ನಮ್ಮಕುಡ್ಲ ಗೂಡುದೀಪ ಪಂಥ: ಚಾಲನೆ ನೀಡಿದ ಜನಾರ್ದನ ಪೂಜಾರಿ ದಂಪತಿ


ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಧರ್ಮಪತ್ನಿ ಮಾಲತಿ ಜೆ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಗೂಡುದೀಪ ಸ್ಪರ್ಧೆಯನ್ನು ಉದ್ಘಾಟಿಸಿದ್ದಾರೆ. ಗೂಡುದೀಪವನ್ನು ಏರಿಸಿ ದೀಪ ಉರಿಸುವ ಮೂಲಕ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರು ಚಾಲನೆ ನೀಡಿದ್ದಾರೆ.

ದೀಪಾವಳಿಯ ಸಂದೇಶ ನೀಡಿದ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್, ನಮ್ಮಕುಡ್ಲ ವಾಹಿನಿ 25 ವರ್ಷದಿಂದ ಗೂಡುದೀಪ ಸ್ಪರ್ಧೆ ಆಯೋಜಿಸಿದ ಕಾರಣ ಇಂದಿಗೂ ಗೂಡುದೀಪದ ಬಗ್ಗೆ ಜನರಲ್ಲಿ ಆಸಕ್ತಿಯನ್ನು ಉಳಿಸುವಲ್ಲಿ ಯಶಸ್ವಿಯಾಗಿದೆ. ಕರಾವಳಿಯ ಕಲೆ, ಸಂಸ್ಕೃತಿಯನ್ನು ಪೋಷಿಸುವ ಕೆಲಸ ನಮ್ಮ ಕುಡ್ಲದಿಂದ ಆಗುತ್ತಿದೆ. ಇದರ ಜೊತೆಗೆ ಇನ್ನಷ್ಟು ಹೆಚ್ಚಿನ ಕಾರ್ಯ ಕರ್ಕೇರ ಸಹೋದರರಿಂದ ಆಗಲಿ ಎಂದು ಶುಭ ಹಾರೈಸಿದರು. ಇದೇ ವೇಳೆ ಮಾನ್ಯ ಜನಾರ್ಧನ ಪೂಜಾರಿ ಅವರು ಎಲ್ಲರಿಗೂ ದೀಪಾವಳಿಯ ಶುಭ ಹಾರೈಸಿದರು.

ಗೂಡುದೀಪ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕೋಡಿಕಲ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಅಧ್ಯಕ್ಷ ಎಚ್‌.ಎಸ್‌.ಸಾಯಿರಾಂ, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ದಾಸ್ ಬೋಳಾರ್, ಕುದ್ರೋಳಿ ಕ್ಷೇತ್ರದ ಹರಿಕೃಷ್ಣ ಬಂಟ್ವಾಳ,ಬಿ.ಜಿ.ಸುವರ್ಣ,ಮಾಜಿ ಸಚಿವ ಅಭಯಚಂದ್ರ ಜೈನ್, ಕೆಎಂಎಫ್ ನಿರ್ದೇಶಕ ಸುಚರಿತ ಶೆಟ್ಟಿ ಹಾಗೂ ಕುದ್ರೋಳಿ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.  ನಮ್ಮಕುಡ್ಲ ನಿರ್ದೇಶಕರುಗಳಾದ ಕರ್ಕೇರ ಸಹೋದರರು ಅತಿಥಿಗಳನ್ನು ಸ್ವಾಗತಿಸಿ ಗೌರವ ಸಲ್ಲಿಸಿದರು. ಬಾಸ್ಕರ್ ರೈ ಕುಕ್ಕುವಳ್ಳಿ, ಕದ್ರಿ ನವನೀತ ಶೆಟ್ಟಿ ಹಾಗೂ ಎಂ ಎಸ್ ಕೊಟ್ಯಾನ್  ಕಾರ್ಯಕ್ರಮ ನಿರ್ವಹಿಸಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »