08/08/2026

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

0
IMG_4894

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಹಲವು ತಿಂಗಳ ಬಳಿಕ ವಿಧಾಸಭಾ ವಿಪಕ್ಷ ನಾಯಕನನ್ನಾಗಿ ಆರ್ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ವಿಧಾನಪರಿಷತ್ ವಿರೋಧ ಪಕ್ಷದ ನಾಯಕನನ್ನೂ ಸಹ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ಬೆಂಗಳೂರು, (ಡಿಸೆಂಬರ್ 25): ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ(kota srinivas poojary)ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.

ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ಉ ಸಹ ನೇಮಕ ಮಾಡಲಾಗಿದೆ.


Leave a Reply

Your email address will not be published. Required fields are marked *

You may have missed