ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾದ ಕನ್ನಡ ಸಂಘದ ಬೈಹರೀನ್ ಅಧ್ಯಕ್ಷರಾದ ಅಜಿತ್ ಬಂಗೇರ
Screenshot
ಕನ್ನಡ ಸಂಘದ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ಜೂನ್ 18,2025 ರಂದು, ಬೆಂಗಳೂರಿನಲ್ಲಿ, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರನ್ನು ಭೇಟಿಯಾಗಿ ,ಮಾತುಕತೆ ನಡೆಸಿದರು.
ಈ ವೇಳೆ, ಕನ್ನಡ ಭವನದಲ್ಲಿ ನಡೆಸುತ್ತಿರುವ ವಿವಿಧ ಕನ್ನಡಪರ ಚಟುವಟಿಕೆಗಳು ಹಾಗೂ ಅಲ್ಲಿನ ಕನ್ನಡಿಗರಿಗೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ಬಲವನ್ನು ನೀಡುವ ಸಂಘದ ಧ್ಯೇಯೋದ್ದೇಶಗಳನ್ನು ಪ್ರಸ್ತುತಪಡಿಸಿದರು.
ಡಾ. ಆರತಿ ಕೃಷ್ಣ ಅವರು ಈ ಸಂದರ್ಭದಲ್ಲಿ ಮಾತನಾಡಿ, ಕನ್ನಡ ಸಂಘ ಬಹರೈನ್ ಹಮ್ಮಿಕೊಂಡಿರುವ ಮುಂದಿನ ಎಲ್ಲಾ ಕಾರ್ಯಚಟುವಟಿಕೆಗಳಿಗೆ, ವಿಶೇಷವಾಗಿ ಕನ್ನಡ ಭವನದ ಸೌಕರ್ಯಗಳ ಅಭಿವೃದ್ಧಿ ಯೋಜನೆಗೆ ಹಾಗೂ ಅನಿವಾಸಿ ಕನ್ನಡಿಗರ ಹಿತಾಸಕ್ತಿಗೆ ತನ್ನ ಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.
