ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ

0
IMG-20250604-WA0003

ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿಯವರು ಅಭಿನಂದನೆ ಸಲ್ಲಿಸಿದರು.

 

ಈ ಸಂಧರ್ಭದಲ್ಲಿ ಸುದೀಪ್ ರಾಜ್ ತಂದೆ ಶಿವರಾಜ್ ಹಾಗೂ ತಾಯಿ ರಾಜೀವಿ ಉಪಸ್ಥಿತರಿದ್ದರು.

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಗೆ ಪ್ರವೇಶ ಪಡೆದುಕೊಂಡ ಇವರಿಗೆ ಶುಭಹಾರೈಸಲಾಯಿತು.


Leave a Reply

Your email address will not be published. Required fields are marked *