08/08/2026

ಭಟ್ಕಳದ ನಾಗಶ್ರೀ ನಾಯ್ಕ ಕರಾಟೆ ಕ್ರೀಡೆಯಲ್ಲಿ ಯುನಿವರ್ಸಿಟಿ ಬ್ಲೂ

0

ಭಟ್ಕಳ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿ ನ ವಿದ್ಯಾರ್ಥಿಯಾದ ಕುಮಾರಿ. ನಾಗಶ್ರೀ ನಾಯ್ಕ ಇವಳು ಯುನಿವರ್ಸಿಟಿ ಬ್ಲೂ ಆಯ್ಕೆಯಾಗಿ ಹರಿಯಾಣಾ ರಾಜ್ಯದ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ಜರುಗುತ್ತಿರುವ ಅಂತರ ವಿಶ್ವವಿದ್ಯಾಲಯ-ರಾಷ್ಟ್ರಮಟ್ಟದ ಕರಾಟೆ ಕ್ರೀಡೆಯಲ್ಲಿ ಉತ್ತರವಲಯವನ್ನು ಪ್ರತಿನಿಧಿಸಿ, ಜಿಲ್ಲೆಗೆ, ಕಾಲೇಜಿಗೆ ಹಾಗೂ ನಮ್ಮ ಸಮಾಜಕ್ಕೆ ಕೀರ್ತಿ ತಂದಿರುತ್ತಾರೆ.ಇವರ ಸಾಧನೆಗೆ ಭಟ್ಕಳ ಶೋಟೊಕಾನ್ ಕರಾಟೆ ಇನ್ಸ್ಟಿಟ್ಯೂಟ್, ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರಾದ, ಉಪನ್ಯಾಸಕರು, ಸಿಬ್ಬಂದಿವರ್ಗ, ಕರಾಟೆ ತರಬೇತುದಾರರು, ಪಾಲಕರಾದ ಶ್ರೀಮತಿ ಪದ್ಮಾವತಿ ಹಾಗೂ ಶ್ರೀ ವೆಂಕಟೇಶ ನಾಯ್ಕ ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಗಳಿಸಲೆಂದು ಶುಭ ಹಾರೈಸಿರುತ್ತಾರೆ.


Leave a Reply

Your email address will not be published. Required fields are marked *

You may have missed