ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ

0

ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.

ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru International Airport) ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ಮಾಡಲಾಗಿದೆ. ಪವರ್ ಸಪ್ಲೇ ಸಮಸ್ಯೆಯಿಂದ ರನ್ ವೇನಲ್ಲಿ ಕತ್ತಲು ಆವರಿಸಿದೆ. ಮುಂಬೈನಿಂದ ಆಗಮಿಸಿದ ವಿಮಾನ ಎಟಿಸಿಸೂಚನೆ ಹಿನ್ನೆಲೆ ಲ್ಯಾಂಡ್ ಆಗದೇ ಕೇರಳದ ಕಣ್ಣೂರಿಗೆ ವಾಪಾಸ್ ತೆರಳಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಮಂಗಳೂರಿಗೆಬರುವ ಮತ್ತು ಹೋಗುವ ಎಲ್ಲಾ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.IMG 0445

ವಿದ್ಯುತ್‌ ಪೂರೈಕೆ ಸಮಸ್ಯೆಯನ್ನು ಏರ್‌ಪೋರ್ಟ್ ಸಿಬ್ಬಂದಿಗಳು ಸರಿಪಡಿಸುತ್ತಿದ್ದು, ಬಹರೈನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾಸಂಚಾರದಲ್ಲಿ ವಿಳಂಬವಾಗಿದೆ. ಜೊತೆಗೆ ಚೆನ್ನೈ, ಬೆಂಗಳೂರಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ಕೂಡ ವಿಳಂಬವಾಗುತ್ತಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರೀ ದುರಂತ 

ಇತ್ತೀಚೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದುಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಭಾರೀ ದುರಂತ ತಪ್ಪಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿಹೊಡೆದಿತ್ತು. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದರು. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ವೇನಿಂದ ವಿಮಾನವನ್ನು ವಾಪಾಸ್ ತರಲಾಗಿತ್ತು.

ಬಲಿಕ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಯಿತು. ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಅವಘಡಆತಂಕಕ್ಕೆ ಕಾರಣವಾಗಿತ್ತು.


Leave a Reply

Your email address will not be published. Required fields are marked *